×
Ad

ವಿಟ್ಲ: ಸರಕಾರಿ ವಿದ್ಯಾರ್ಥಿ ನಿಲಯದಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

Update: 2023-08-22 09:37 IST

ವಿಟ್ಲ, ಆ.22: ಇಲ್ಲಿನ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಕ್ಷೀತ್(15) ಮತ್ತು ಗಗನ್(14) ನಾಪತ್ತೆಯಾಗಿರುವ ವಿದ್ಯಾರ್ಥಿಗಳು. ಇವರಿಬ್ಬರು ಆ.21ರಂದು ಬೆಳಗ್ಗೆ ಶಾಲೆಗೆಂದು ವಿದ್ಯಾರ್ಥಿ ನಿಲಯದಿಂದ ತೆರಳಿದವರು ಶಾಲೆಗೂ ಹೋಗದೇ ವಾಪಸ್ ವಿದ್ಯಾರ್ಥಿ ನಿಲಯಕ್ಕೂ ಬಾರದೆ ನಾಪತ್ತೆಯಾಗಿದ್ದಾರೆ. ಸಂಜೆ ಇದು ಬೆಳಕಿಗೆ ಬಂದಿದೆ ಎಂದು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ದೀಕ್ಷೀತ್ ಹಾಗೂ ಗಗನ್ ತಮ್ಮ ಮನೆಗೂ ತೆರಳಲಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News