ವಿಟ್ಲ: ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
ವಿಟ್ಲ: ಕಳ್ಳತನ ಪ್ರಕರಣದಲ್ಲಿ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ಅ.ಕ್ರ: 110/2019, ಕಲಂ 457, 380 IPC ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ಎಂಬಾತ ಬಂಧಿತ ವ್ಯಕ್ತಿ.
ವಿಟ್ಲ ಪೊಲೀಸ್ ಠಾಣಾ ಎಎಸ್ಐ ಜಯರಾಮ ಹಾಗೂ ಸಿಪಿಸಿ 2462 ಶಿವಾನಂದ ರವರು ಅ.13 ರಂದು ಕೇರಳದ ನೀಲಂಬೂರಿನ ವಂಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.