×
Ad

ಮಂಡೆಕೋಲು ಗಡಿ ಪ್ರದೇಶದಲ್ಲಿ ಮತ್ತೆ ಕಾಡಾನೆ ಹಿಂಡು ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

Update: 2023-12-13 18:51 IST

ಸುಳ್ಯ: ಮಂಡೆಕೋಲು ಗಡಿ ಪ್ರದೇಶದಲ್ಲಿ 9 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.

ಮಂಡೆಕೋಲು ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆಗಳ ದಾಳಿ ಕಳೆದ 2 ತಿಂಗಳಿನಿಂದ ತೀವ್ರಗೊಂಡಿದ್ದು ಸುಮಾರು 9 ಆನೆಗಳ ಹಿಂಡು ಕಂಡು ಬಂದಿದೆ. ಪಂಜಿಕಲ್ಲು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡು ಬಂದಿದೆ. ಕಾಡಾನೆಗಳ ಹಿಂಡು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದೆ.

ಕಳೆದ ಕೆಲ ದಿನಗಳಿಂದ ಮಂಡೆಕೋಲು ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಜನವಸತಿ ಪ್ರದೇಶ, ಸಾರ್ವಜನಿಕ ಸ್ಥಳಗಳಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷಗೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News