×
Ad

ಪುತ್ತೂರು ಪೊಲೀಸ್ ಠಾಣೆ ಬಳಿ ಚಾಕುವಿನಿಂದ ಇರಿತಕ್ಕೊಳಗಾದ ಯುವತಿ ಮೃತ್ಯು: ಆರೋಪಿ ಸೆರೆ

Update: 2023-08-24 16:11 IST

ಆರೋಪಿ ಪದ್ಮರಾಜ್

ಪುತ್ತೂರು: ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವುದಾಗಿ ವರದಿಯಾಗಿದೆ. 

ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೆರದೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ಧಾರೆನ್ನಲಾಗಿದೆ. 

ಇರಿತಕ್ಕೆ ಒಳಗಾಗಿರುವ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ. ಆರೋಪಿ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಯು ಗುರುವಾರ ಮಧ್ಯಾಹ್ನ ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೈಯಲು ಯತ್ನ ನಡೆಸಿದ್ದಾನೆ. ಗಾಯಗೊಂಡು ಯುವತಿ ಬಿದ್ದ ಬಳಿಕ ಪರಾರಿಯಾಗಿದ್ದ ಎನ್ನಲಾಗಿದ. 

ಆರೋಪಿಯ ಬಂಧನ

ʼʼಬಂಟ್ವಾಳ ತಾಲೂಕಿನ ಅಳಿಕೆ ನಿವಾಸಿ 18 ವರ್ಷದ ಗೌರಿ ಎಂಬ ಯುವತಿಗೆ ಪದ್ಮರಾಜ್ ಎಂಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಪುತ್ತೂರು ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆʼʼ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News