Davanagere | ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ತೀವ್ರ ತಪಾಸಣೆ, ಪೊಲೀಸ್ ಬಿಗಿ ಭದ್ರತೆ
Update: 2026-02-16 12:01 IST
ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ನ್ಯಾಯಾಲಯ ಸಂಕೀರ್ಣವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು.
ಇಂದು (ಸೋಮವಾರ) ಬೆಳಗ್ಗೆ 8:30ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ. ತಕ್ಷಣ ಶ್ವಾನ ದಳ, ಬಾಂಬ್ ನಿಷ್ಕೃಯ ದಳ ನ್ಯಾಯಾಲಯಕ್ಕೆ ಆಗಮಿಸಿ ಇಡೀ ನ್ಯಾಯಾಲಯ ಸಂಕೀರ್ಣವನ್ನು ತಪಾಸಣೆ ನಡೆಸಿತು. ಆದರೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಬಾಂಬ್ ಬೆದರಿಕೆ ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳು, ಕಟ್ಟಡಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.