×
Ad

ಲಂಚ ಸ್ವೀಕಾರ ಆರೋಪ; ದಾವಣಗೆರೆ ವಿವಿಯ ಪ್ರಾಧ್ಯಾಪಕಿ ಸಹಿತ 10 ಮಂದಿ ಬಂಧನ

Update: 2025-02-03 08:00 IST

ಗಾಯತ್ರಿ ದೇವರಾಜ್

ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್ಇಎಫ್ ಯುನಿವರ್ಸಿಟಿ ಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ  ಸಹಿತ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯೋಲಜಿ ಪ್ರೊಫೆಸರ್ ಗಾಯತ್ರಿ ದೇವರಾಜ್ ಹಾಗೂ 10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ತಂಡದ ಅಧ್ಯಕ್ಷರು, ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.

ಇದಲ್ಲದೆ ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News