ದಾವಣಗೆರೆ | ಬೀದಿ ನಾಯಿ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಮೃತ್ಯು
Update: 2025-08-18 18:57 IST
ಖದೀರಾ ಬಾನು
ದಾವಣಗೆರೆ, ಆ.18: ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಮೃತಪಟ್ಟ ಘಟನೆ ರವಿವಾರ ರಾತ್ರಿ ವರದಿಯಾಗಿದೆ.
ನಗರದ ಶಾಸ್ತ್ರಿ ಬಡಾವಣೆಯ ಖದೀರಾ ಬಾನು (4) ಮೃತ ಮಗು ಎಂದು ತಿಳಿದು ಬಂದಿದೆ.
ನಾಲ್ಕು ತಿಂಗಳ ಹಿಂದೆ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ದಾಳಿ ನಡೆಸಿತ್ತು. ಇದರಿಂದ ಮಗು ರೇಬಿಸ್ ಕಾಯಿಲೆಗೆ ತುತ್ತಾಗಿದ್ದು, ನಾಲ್ಕು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದ್ದು, ರವಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಗು ಬಾಲಕಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.