×
Ad

Channagiri | ಕಾರುಗಳ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Update: 2026-02-06 18:31 IST

ಚನ್ನಗಿರಿ : ತಾಲೂಕಿನ ಹೊನ್ನೆಬಾಗಿ ಗ್ರಾಮದ ಬಳಿ ಕಾರುಗಳು ಮುಖಾಮುಖಿಯಾಗಿ ಢಿಕ್ಕಿಯಾಗಿ ‌ಓರ್ವ ಮೃತಪಟ್ಟಿದ್ದು,  ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕಾರು ಚಾಲಕ ನಯಾಝ್ ಎಂದು ಗುರುತಿಸಲಾಗಿದೆ. ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಫತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News