×
Ad

DAVANAGERE | ಆಸ್ತಿ ವಿವಾದ: ವೃದ್ಧ ಸಹೋದರರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

Update: 2026-02-03 15:11 IST

ನೀಲಪ್ಪ

ದಾವಣಗೆರೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧ ಸಹೋದರರಿಬ್ಬರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಎಂಬಲ್ಲಿ ನಡೆದಿದೆ.

ಕೊಲೆಯಾದವರನ್ನು ನೀಲಪ್ಪ (65) ಎಂದು ಗುರುತಿಸಲಾಗಿದೆ. ಅವರ ಅಣ್ಣ ಚಂದ್ರಪ್ಪ (68) ಕೊಲೆ ಆರೋಪಿಯಾಗಿದ್ದಾನೆ.

ಆಸ್ತಿ ವಿಚಾರವಾಗಿ ಇವರಿಬ್ಬರ ನಡುವೆ ಅಡಿಕೆ ತೋಟದಲ್ಲಿ ಸೋಮವಾರ ಮಾತಿನ ಚಕಮಕಿ ನಡೆದಿದೆ. ಬಳಿಕ ಈ ಗಲಾಟೆ ತೀವ್ರ ಸ್ವರೂಪ ಪಡೆದಿದ್ದು, ಆರೋಪಿ ಚಂದ್ರಪ್ಪ ಮಚ್ಚಿನಿಂದ ನೀಲಪ್ಪರ ಮೇಲೆ ಹಲ್ಲೆ ನಡೆಸಿದ್ದಾನೆನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ನೀಲಪ್ಪ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ಪಡೆದ ಮಾಯಕೊಂಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಚಂದ್ರಪ್ಪನನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News