Davanagere | ಮಾನಸಿಕ ಅಸ್ವಸ್ಥ ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 21 ವರ್ಷ ಜೈಲು
ದಾವಣಗೆರೆ : 16 ವರ್ಷದ ಮಾನಸಿಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನ್ಯಾಯಾಲಯ 21 ವರ್ಷ ಕಾರಾಗೃಹ ಶಿಕ್ಷೆ ಮತ್ತು ರೂ.30 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.
2024 ರಲ್ಲಿ ಆರೋಪಿ ಗಣೇಶ (24 ) ಎಂಬಾತ 16 ವರ್ಷದ ಅಪ್ರಾಪ್ತ ವಯಸ್ಸಿನ ಮಾನಸಿಕ ಅಸ್ವಸ್ಥ ಬಾಲಕಿಯನ್ನು ಪುಸಲಾಯಿಸಿ ಹಲವಾರು ಬಾರಿ ಅತ್ಯಾಚಾರ ಮಾಡಿದ ಕುರಿತು ಬಾಲಕಿಯ ತಾಯಿಯು ದೂರು ನೀಡಿದ್ದರು.
ಈ ಸಂಬಂಧ 10.06.2024 ರಂದು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಕಲಂ: 376(ಎಂ), 376(ಎಲ್), 506 ಐಪಿಸಿ ಮತ್ತು 6 ಪೋಕ್ಸೊ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖಾಧಿಕಾರಿ ಸುನೀಲ್ ಕುಮಾರ್ ಹೆಚ್ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ನಾರಾಯಣ ಹೆಗಡೆ ಅವರು ಆರೋಪಿ ಗಣೇಶನ ಮೇಲೆ ಆರೋಪ ಸಾಬೀತಾಗಿದ್ದರಿಂದ ನ.26 ರಂದು ಆರೋಪಿಗೆ 21 ವರ್ಷ ಕಾರಾಗೃಹ ಶಿಕ್ಷೆ ಹಾಗೂ ರೂ. 30,000/- ದಂಡ ವಿಧಿಸಿದ್ದಾರೆ. ಸಂತ್ರಸ್ಥೆಗೆ ಸರ್ಕಾರದಿಂದ ರೂ.10,50,000/- ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
ಸರ್ಕಾರಿ ವಕೀಲರಾದ ಗೋಪಿಕಾ ಅವರು ನ್ಯಾಯ ಮಂಡನೆ ಮಾಡಿದ್ದಾರೆ. ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಸುನೀಲ್ ಕುಮಾರ್ ಹೆಚ್, ಸಿಬ್ಬಂದಿಗಳನ್ನು ಎಸ್ಪಿ ಶೇಖರ ಹೆಚ್.ಟಿ, , ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಶ್ಲಾಘಿಸಿದ್ದಾರೆ.