Davangere | ಹಣಕಾಸು ವಿಚಾರದಲ್ಲಿ ಗಲಾಟೆ; ಚಾಕು ಇರಿತದಿಂದ ಯುವಕ ಸಾವು

Update: 2026-08-05 22:27 IST

ದಾವಣಗೆರೆ: ಹಣಕಾಸು ವಿಚಾರದಲ್ಲಿ ಗಲಾಟೆ ನಡೆದು ಚಾಕು ಇರಿತಕ್ಕೊಳಗಾಗಿ ಯುವಕನೊಬ್ಬ ಮೃತಪಟ್ಟರುವ ಘಟನೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಚೀಲಾಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತರನ್ನು ಚೀಲಾಪುರ ಗ್ರಾಮದ ಜಾಹೀರ್ ಖಾನ್ (19) ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಗ್ರಾಮದ ಅಕ್ಕಪಕ್ಕದ ಎರಡು ಮನೆಯವರ ಮಧ್ಯೆ ಹಣಕಾಸಿನ ವಿಚಾರದಲ್ಲಿ ಪ್ರಾರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ.

ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

ಸಲೀಂ ಖಾನ್, ಚಮನ್ ಸಾಬ್, ಸುಭಾನ್, ಮುಜುಬ್ ಎಂಬುವರು ನನ್ನ ಮಗನನ್ನು ಹತ್ಯೆ ಮಾಡಿದ್ದಾರೆ ಎಂದು ಮೃತ ಯುವಕನ ತಂದೆ ಬುಡೇನ್ ಸಾಬ್ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಎಚ್.ಟಿ.ಶೇಖರ್, ಹೊನ್ನಾಳಿ ಪಿ.ಐ. ಸುನಿಲ್ ಕುಮಾರ್, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News