×
Ad

ದಾವಣಗೆರೆ : ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು

Update: 2024-02-24 18:16 IST

ಸಾಂದರ್ಭಿಕ ಚಿತ್ರ

ದಾವಣಗೆರೆ : 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಕೊಟ್ರೇಶ್ ಮೃತ ಬಾಲಕನಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಘಟನೆ ಸಂಭವಿಸಿದೆ.

ಘಟನೆ ಸಂಬಂಧ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News