×
Ad

ದಾವಣಗೆರೆ | ಸಮೀಕ್ಷೆಯ ವೇಳೆ ಶಿಕ್ಷಕರೊಬ್ಬರಿಗೆ ಹೃದಯಾಘಾತ : ಅಪಾಯದಿಂದ ಪಾರು

Update: 2025-10-07 15:50 IST

     ಸಾಂದರ್ಭಿಕ ಚಿತ್ರ | PC : freepik

ದಾವಣಗೆರೆ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕರೊಬ್ಬರು ಹೃದಯಾಘಾತಕ್ಕೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಸಮೀಕ್ಷೆಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸ್ಟಂಟ್ ಅಳವಡಿಸಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸದ್ಯ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು, ಶಿಕ್ಷಕ ಪ್ರಕಾಶ್ ಅವರನ್ನು ಭೇಟಿಯಾಗಲಿದ್ದೇನೆ. ಸಮೀಕ್ಷೆ ವೇಳೆ ನಾಯಿ ಕಡಿತ ಸೇರಿದಂತೆ ಮೂವರಿಗೆ ತೊಂದರೆ ಉಂಟಾಗಿದ್ದು, ಅವರಿಗೆಲ್ಲಾ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News