×
Ad

ದಾವಣಗೆರೆ | ಅತ್ಯಾಚಾರ ಪ್ರತಿರೋಧಿಸಿದ ಮಹಿಳೆಗೆ ಚಾಕು ಇರಿತ : ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Update: 2024-06-22 12:37 IST

ದಾವಣಗೆರೆ : ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ‌ನಿರಾಕರಿಸಿದ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದ್ದು, ಆರೋಪಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

 ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಕಾಟಪ್ಪ (30) ಎಂದು ಗುರುತಿಸಲಾಗಿದ್ದು, ಆರೋಪಿ ಕಾಟಪ್ಪ ‌ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ‌ ಮುಂದಾಗಿದ್ದಾನೆ ಎನ್ನಲಾಗಿದೆ. ಈ ವೇಳೆ ಮಹಿಳೆ ಅತ್ಯಾಚಾರಕ್ಕೆ ಪ್ರತಿರೋಧ ಒಡ್ಡಿ ಕೂಗಿಕೊಂಡಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ವಿಚಾರಗೊತ್ತಾಗುತ್ತದೆ ಎಂದು ಮಹಿಳೆಯ ಕುತ್ತಿಗೆ ಸೇರಿದಂತೆ ಮೂರು ಕಡೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಮಹಿಳೆ ಚೀರಾಟ ಕೇಳಿಸಿಕೊಂಡ ಗ್ರಾಮಸ್ಥರು ಮನೆಗೆ ಧಾವಿಸಿ ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News