ದಾವಣಗೆರೆ | ಓಮ್ನಿ- ಕೆಎಸ್ಸಾರ್ಟಿಸಿ ಬಸ್ ಮಧ್ಯೆ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Update: 2024-04-11 09:23 GMT

ದಾವಣಗೆರೆ, ಎ.11: ಓಮ್ನಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಹರಬಗಟ್ಟದ ನಂಜುಂಡ್ಪ(83), ಸೂರನಗೊಂಡಕೊಪ್ಪದ ದೇವರಾಜ್ (27) ಮತ್ತು ರಾಕೇಶ್ (30) ಮೃತಪಟ್ಟವರು. ಶಿಕಾರಿಪುರದ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಓಮ್ನಿ ಮಧ್ಯೆ ಅಪಘಾತವಾಗಿದೆ.

ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಣ್ಣಪುಟ್ಟ ಗಾಯಾಳುಗಳಿಗೆ ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News