×
Ad

ದಾವಣಗೆರೆ | ಪೆಟ್ರೋಲ್ ಸುರಿದು ಎಟಿಎಂ ದರೋಡೆಗೆ ಯತ್ನ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Update: 2025-06-29 23:01 IST

ದಾವಣಗೆರೆ: ಇಲ್ಲಿನ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನಿಸಿದ ಘಟನೆ ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಳಿಚೋಡು ಗ್ರಾಮದಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಮಧ್ಯ ರಾತ್ರಿ ನುಗ್ಗಿದ್ದ ಆರೋಪಿ ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಇದು ಸಾಧ್ಯವಾಗದೆ ಇದ್ದಾಗ ಪೆಟ್ರೋಲ್ ಸುರಿದಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದೆ.

ದಟ್ಟ ಹೊಗೆ ಆವರಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾರೆ. ಈ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News