ದಾವಣಗೆರೆ | ಹೃದಯಾಘಾತದಿಂದ 9 ನೇ ತರಗತಿ ವಿದ್ಯಾರ್ಥಿ ಮೃತ್ಯು
Update: 2026-02-23 12:29 IST
ದಾವಣಗೆರೆ: 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಚಮನ್ ಸಾಬ್ ಮತ್ತು ಫಾತಿಮಾ ದಂಪತಿಯ ಮೂರು ಮಕ್ಕಳಲ್ಲಿ ದ್ವಿತೀಯ ಪುತ್ರನಾಗಿದ್ದ ಮುಝಮ್ಮಿಲ್ ಎಂಬಾತ ಮೃತ ಬಾಲಕ. ಈತ ತಾಲೂಕಿನ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆ ವೇಳೆಗೆ ಮೂತ್ರ ವಿಸರ್ಜನೆ ಮಾಡಿ ಮನೆ ಒಳಗೆ ಬಂದು ಕುಸಿದು ಬಿದ್ದಿದ್ದಾನೆ. ತಕ್ಷಣ ಪೋಷಕರು ಆತನನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮುಝಮ್ಮಿಲ್ ಕಲಿಯುತ್ತಿದ್ದ ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಮತ್ತು ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯ ಶಾಲೆಯ ಮುಖ್ಯಶಿಕ್ಷಕರು ,ಶಿಕ್ಷಕರು , ಗೋಗುದ್ದು ಗ್ರಾಮದ ಮುಖಂಡರು ಸಂತಪ ಸೂಚಿಸಿದ್ದಾರೆ.