×
Ad

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ; ತಾಯಿ, ಮಗ ಮೃತ್ಯು

Update: 2025-07-01 11:46 IST

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ  ದಾವಣಗೆರೆ ನಗರದ ಕಾಯಿಪೇಟೆಯ ಮನೆಯೊಂದರಲ್ಲಿ ಮಂಗಳವಾರ ಮುಂಜಾನೆ 4 ಗಂಟೆಯ ಹೊತ್ತಿಗೆ ನಡೆದಿದೆ.

ಕಾಯಿಪೇಟೆ ನಿವಾಸಿ ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಅವರಿಗೆ ಸಂಬಂಧಿಸಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ರುದ್ರಮುನಿಸ್ವಾಮಿ ಅವರ ಸಂಬಂಧಿ ವಿಮಲಾ (75) ಹಾಗೂ ಅವರ ಪುತ್ರ ಕುಮಾರ್ (35) ಮೃತಪಟ್ಟವರು. ಕುಟುಂಬದ ಇನ್ನೂ ನಾಲ್ವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಮನೆಯಲ್ಲಿದ್ದ ಆರು ಜನರ ಪೈಕಿ ನಾಲ್ವರು ಹೊರಬಂದಿದ್ದಾರೆ. ತಾಯಿ ಮಗ ಇದ್ದ ರೂಮಿನಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಹೊರ ಬರಲು ಸಾಧ್ಯವಾಗಿಲ್ಲ. ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕೊಠಡಿಯಲ್ಲಿ ಸಿಲುಕಿದ್ದ ತಾಯಿ ಮತ್ತು ಮಗನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News