×
Ad

ದಾವಣಗೆರೆ | ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Update: 2025-10-11 15:38 IST

ದಾವಣಗೆರೆ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.

ವಸಂತ (23) ಶಿಕ್ಷೆಗೊಳಗಾದ ಆರೋಪಿ.

18-08.2023ರಂದು ಬಾಲಕಿಯ ತಾಯಿ ಮಗಳು ಕಾಣೆಯಾಗಿರುವ ಬಗ್ಗೆ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ದೋಷರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ತನಿಖೆಯಿಂದ ಆರೋಪಿ ಅತ್ಯಾಚಾರ ಎಸಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆಯವರು ಆರೋಪಿ ವಸಂತ (23)ನಿಗೆ 20 ವರ್ಷ ಕಾರಾಗೃಹ ಶಿಕ್ಷೆ ಒಟ್ಟು ಮೊತ್ತ 35,000 ರೂ.ನ್ನು ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಹಾಗೂ ಸಂತ್ರಸ್ತೆಗೆ ಸರಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರಕಾರಿ ವಕೀಲ ಬಸವರಾಜ್ ಎ. ಎಂ. ವಾದಿಸಿದ್ದಾರೆ.

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ , ಪೊಲೀಸ್ ನಿರೀಕ್ಷಕ ನೂರ್ ಅಹ್ಮದ್ ಮತ್ತು ಸಿಬ್ಬಂದಿಯನ್ನು ಹಾಗೂ ಸರಕಾರಿ ವಕೀಲ ಬಸವರಾಜ್ ರನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News