×
Ad

ದಾವಣಗೆರೆ : ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2025-11-25 10:43 IST

ದಾವಣಗೆರೆ : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಪ್ರಭು. ಜೆ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ ಹಾಗೂ ದಾವಣಗೆರೆ ತಾಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ.ಎಸ್.ಕೌಲಾಪೋರೆ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ.

ಹಲವು ವರ್ಷಗಳಿಂದ ದಾವಣಗೆರೆಯಲ್ಲಿ ಸೇವೆ ಸಲ್ಲಿಸುತ್ತಿರುವ  ಪ್ರಭು ಜೆ. ಅವರು ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿ ಎರಡು ಅಂತಸ್ತಿನ ಮನೆ, ಚಿನ್ನ, ಬೆಳ್ಳಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಇನ್ನಷ್ಟು ಕಡೆ ಸೈಟ್ ಹಾಗೂ ಜಮೀನು ಖರೀದಿ ಮಾಡಿರುವ ಶಂಕೆಯಿದೆ.

ದಾಳಿಯಲ್ಲಿ ಡಿವೈಎಸ್ಪಿ ಕಲಾವತಿ, ಇನ್‌ಸ್ಪೆಕ್ಟರ್ ಗುರುಬಸವರಾಜ ಇವರ ತಂಡ ಪರಿಶೀಲನೆ ನಡೆಸುತ್ತಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News