ದಾವಣಗೆರೆ | ನಗರದಲ್ಲಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಗಲಾಟೆ, ಕಲ್ಲು ತೂರಾಟ ನಡೆದಿಲ್ಲ: ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ
Update: 2025-09-25 12:18 IST
ದಾವಣಗೆರೆ : ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಾಟೆ ಅಥವಾ ಕಲ್ಲು ತೂರಾಟ ನಡೆದಿಲ್ಲ ಎಂದು ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪ್ರಕಟನೆ ಹೊರಡಿಸಿದ ಎಸ್ಪಿ ಉಮಾ ಪ್ರಶಾಂತ್, ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬ್ಯಾನರ್ ವಿಚಾರವಾಗಿ ನಿನ್ನೆ ರಾತ್ರಿ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ಅಥವಾ ಗಲಭೆ ನಡೆದಿಲ್ಲ ಎಂದು ಹೇಳಿದ್ದಾರೆ.
ಬ್ಯಾನರ್ ವಿಚಾರಕ್ಕೆ ವಾಗ್ವಾದ ನಡೆದ ಬಗ್ಗೆ ಮಾಹಿತಿ ಪಡೆದ ತಕ್ಷಣ ಐಜಿಪಿ ರವಿಕಾಂತೇಗೌಡ ಹಾಗೂ ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.
ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ನಲ್ಲಿ ಫ್ಲೆಕ್ಸ್ ಅಳವಡಿಕೆಗೆ ಒಂದು ಸಮುದಾಯ ವಿರೋಧ ಮಾಡಿದೆ. ಈ ಹಿನ್ನಲೆಯಲ್ಲಿ ಎರಡು ಸಮುದಾಯದ ಯುವಕರು ಗಲಾಟೆ ನಡೆಸಿದ್ದಾರೆ. ನಂತರ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿತ್ತು.