×
Ad

ಹರಿಹರ | ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ; ಇಬ್ಬರು ಯುವತಿಯರು ಮೃತ್ಯು, ಓರ್ವ ಗಂಭೀರ

Update: 2025-05-15 20:56 IST

ದಾವಣಗೆರೆ: ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದ ಬಳಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯುರು ಮೃತಪಟ್ಟಿರುವ ಘಟನೆ ನಡೆದಿದೆ.

ಹೊಳೆಸಿರಿಗೆರೆ ಸುಮಾ (24) ಕಡರನಾಯ್ಕನಹಳ್ಳಿ ಪಲ್ಲವಿ (23) ಮೃತ ಯುವತಿಯರು. ಬೈಕ್ ಸವಾರ ಸಚಿನ್ (24) ಗೆ ತೀವ್ರ ಗಾಯವಾಗಿದೆ.

ಸುಮಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಲ್ಲವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಸಚಿನ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ನಿವಾಸಿಯಾಗಿದ್ದು, ಸಂಬಂಧಿಗಳಾದ ಸುಮಾ ಹಾಗೂ ಪಲ್ಲವಿಯನ್ನು  ಬೈಕ್ ಮೇಲೆ ಕರೆದುಕೊಂಡು ಬರುವಾಗ ಈ ಅವಘಡ ನಡೆದಿದೆ ಎನ್ನಲಾಗಿದೆ.

ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲೇಬೆನ್ನೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News