×
Ad

ದಾವಣಗೆರೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

Update: 2024-09-21 22:06 IST

ದಾವಣಗೆರೆ: ನಗರದ ಬಾರ್‌ವೊಂದರಲ್ಲಿ ಸ್ನೇಹಿತನೊಂದಿಗೆ ಕುಳಿತಿದ್ದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಕುಮಾರ್(36) ಕೊಲೆಯಾದ ವ್ಯಕ್ತಿ.

ಕೆಟಿಜೆ ನಗರದಲ್ಲಿರುವ ಪ್ರಕಾಶ್ ಬಾರ್‌ನಲ್ಲಿ ಸ್ನೇಹಿತರ ಜೊತೆ ಕುಳಿತಿದ್ದ ಕುಮಾರ್‌ನಿಗೆ ಹಿಂದಿನಿದ ಬಂದ ಗೌತಮ್(38) ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೆಟಿಜೆ ನಗರ ಪೊಲೀಸರು ಇರಿತಕ್ಕೆ ಒಳಗಾದ ಕುಮಾರನನ್ನು ಪೊಲೀಸ್ ಜೀಪಿನಲ್ಲಿಯೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರು. ಆದರೆ ಮಾರ್ಗಮಧ್ಯೆ ಕುಮಾರ್  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News