×
Ad

ಚುನಾವಣಾ ಮಾರ್ಗಸೂಚಿ ಉಲ್ಲಂಘನೆ | ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ಧ ದೂರು ದಾಖಲು

Update: 2024-05-07 22:36 IST

ದಾವಣಗೆರೆ : ಸಂಸದ ಜಿ.ಎಂ.ಸಿದ್ದೇಶ್ವರ ಅವರ ಮೇಲೆ‌ ಚುನಾವಣಾ ಮಾರ್ಗಸೂಚಿ ಉಲ್ಲಂಘಿಸಿರುವ ಆರೋಪದಲ್ಲಿ ದೂರು ದಾಖಲಾಗಿರುವುದಾಗಿ ವರದಿಯಾಗಿದೆ.

ಮಂಗಳವಾರ ಮಾಗನೂರು ಬಸಪ್ಪ ಮತಗಟ್ಟೆಗೆ ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿಯೂ ಆಗಿರುವ ಗಾಯತ್ರಿ ಸಿದ್ದೇಶ್ವರ ಅವರೊಂದಿಗೆ ಮತದಾನ ಮಾಡಲು ಆಗಮಿಸಿದ ವೇಳೆ, ಸಂಸದ ಜಿ.ಎಂ. ಸಿದ್ದೇಶ್ವರ ಅವರು ಗಾಯತ್ರಿ ಅವರು ಮತದಾನ ಮಾಡುತ್ತಿರುವುದು, ವಿದ್ಯುನ್ಮಾನ ಮತಯಂತ್ರ(ಇವಿಎಂ) ನೋಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದನ್ನು ಗಮನಿಸಿರುವ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರೂ ಆಗಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ಎನ್.ಆರ್. ರಾಜೇಶ್ ಕುಮಾರ್ ಅವರು ದೂರು ನೀಡಿದ್ದು, ಜಿ.ಎಂ.ಸಿದ್ದೇಶ್ವರ ಅವರ ವಿರುದ್ಧ ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News