×
Ad

ವೀರಶೈವರು, ಒಕ್ಕಲಿಗರಿಂದ ಒಗ್ಗಟ್ಟಿನ ಹೋರಾಟ : ಶಾಮನೂರು ಶಿವಶಂಕರಪ್ಪ

Update: 2025-04-16 21:45 IST

ದಾವಣಗೆರೆ : ನಮ್ಮ ರಾಜ್ಯದಲ್ಲಿ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರನ್ನು ಎದುರು ಹಾಕಿಕೊಂಡು ಅಧಿಕಾರ ನಡೆಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಸುಖಾಸುಮ್ಮನೆ ಹೇಳುತ್ತಿದೆ. ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಹೆಚ್ಚಿದೆ. ಎರಡನೇ ಸ್ಥಾನದಲ್ಲಿ ಒಕ್ಕಲಿಗರಿದ್ದಾರೆ ಎಂದರು.

ಒಂದು ವೇಳೆ ರಾಜ್ಯ ಸರಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗರು ಒಟ್ಟಾಗಿ ಸೇರಿ ಹೋರಾಟ ನಡೆಸಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News