Davanagere | ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ
Update: 2025-11-29 23:10 IST
ದಾವಣಗೆರೆ : ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ನಗರದ ನಿಟುವಳ್ಳಿಯ ಖಾದಿ ಕೇಂದ್ರದ ಬಳಿಯ ನಿವಾಸಿ, ನಿವೃತ್ತ ಪೊಲೀಸ್ ಉಪಾಧೀಕ್ಷಕ ಎಚ್.ವೈ.ತುರಾಯಿ(70) ಆತ್ಮಹತ್ಯೆ ಮಾಡಿಕೊಂಡವರು.
ಮನೆಯಲ್ಲಿ ಇದ್ದಾಗ ತಮ್ಮದೇ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿರುವ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, 2014ರಲ್ಲಿ ವಯೋ ನಿವೃತ್ತಿ ಹೊಂದಿದ್ದ ಎಚ್.ವೈ.ತುರಾಯಿ ನಗರದ ನಿಟುವಳ್ಳಿಯ ಖಾದಿ ಗ್ರಾಮೋದ್ಯೋಗ ಕೇಂದ್ರದ ಬಳಿ ವಾಸವಾಗಿದ್ದರು. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.