Davanagere | ಇಡ್ಲಿ ಸಾಂಬಾರಿಗೆ ಬಿದ್ದ ಹುಳು; ತಟ್ಟೆ ಸಮೇತ ಎಡಿಸಿಗೆ ವಿದ್ಯಾರ್ಥಿಗಳಿಂದ ದೂರು
Update: 2026-01-30 00:05 IST
ದಾವಣಗೆರೆ: ನಗರದ ಬೂದಾಳ್ ರಸ್ತೆಯ ಎಸ್‌ಪಿಎಸ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿಗಳು ಹುಳ ಬಿದ್ದ ಸಂಬಾರ್, ಇಡ್ಲಿ ತಟ್ಟೆಯ ಸಮೇತವೇ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ವರದಿಯಾಗಿದೆ.
ನಿತ್ಯವೂ ಕೂದಲು, ಹರಳು, ಸಣ್ಣ ಕಲ್ಲು, ಕಡ್ಡಿಗಳು, ಹುಳಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಅಡುಗೆ ಸಿಬ್ಬಂದಿಯಾಗಲಿ, ವಾರ್ಡನ್ ಆಗಲಿ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ವಾರ್ಡನ್, ಅಡುಗೆ ಸಿಬ್ಬಂದಿಯ ತಪ್ಪಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ನಾನೇ ಶೀಘ್ರ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಮೆನು ಚಾರ್ಟ್ ಪ್ರಕಾರ ಊಟ ನೀಡುತ್ತಿದ್ದಾರೋ ಇಲ್ಲವೋ, ನೋಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಭರವಸೆ ನೀಡಿದರು.