ಕೆ. ಗೋಪಾಲ
ಉಡುಪಿ, ಸೆ.18: ಉಡುಪಿ ರಂಗಭೂಮಿಯ ಸದಸ್ಯ, ಭಾರತೀಯ ಜೀವವಿಮಾ ನಿಗಮದ ನಿವೃತ್ತ ಉದ್ಯೋಗಿ, ಕಾಂಗ್ರೆಸ್ ಕಾರ್ಯಕರ್ತ ಕೆ.ಗೋಪಾಲ (81) ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕಾಸರಗೋಡಿನ ಕೂಡ್ಲಿಯವರಾದ ಕೆ.ಗೋಪಾಲ ಉಡುಪಿಯನ್ನು ಕರ್ಮಭೂಮಿಯನ್ನಾಗಿಸಿಕೊಂಡಿದ್ದರು. 1990ರ ದಶಕದಲ್ಲಿ ರಂಗಭೂಮಿ ಸಂಸ್ಥೆಯ ಸದಸ್ಯರಾಗಿ 1995ರಿಂದ 2010ರವರೆಗೆ ಆಡಳಿತ ಮಂಡಳಿ ಸದಸ್ಯ ರಾಗಿ ಅನಂತರ ಆಡಳಿತ ಮಂಡಳಿಯ ಗೌರವ ಸಲಹಾ ಸಮಿತಿ ಸದಸ್ಯರಾಗಿ ರಂಗಭೂಮಿಯನ್ನು ಬೆಳೆಸುವಲ್ಲಿ ಸೇವೆ ಸಲ್ಲಿಸಿದರು.
ಅಲ್ಲದೇ ಅವರು ಉಡುಪಿ ತುಳುಕೂಟ, ಯಕ್ಷಗಾನ ಕಲಾರಂಗ ಹಾಗೂ ಅನೇಕ ಸಾಂಸ್ಕೃತಿಕ ಸಂಘಟನೆಗಳ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಕಲಾರಂಗ ಅವರಿಗೆ ಯಕ್ಷಚೇತನ ಪ್ರಶಸ್ತಿ ನೀಡಿ ಗೌರವಿಸಿತ್ತು. ಕೆ.ಗೋಪಾಲ ಅವರ ನಿಧನಕ್ಕೆ ರಂಗಭೂಮಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರು ಸಂತಾಪ ವ್ಯಕ್ತಪಡಿಸಿದ್ದಾರೆ.