ಟಿ.ಎ.ಅಬ್ದುಲ್ ಖಾದರ್ ಅಜ್ಜಿನಡ್ಕ
Update: 2026-03-08 11:07 IST
ಉಳ್ಳಾಲ: ಅಜ್ಜಿನಡ್ಕ ನಿವಾಸಿ ಟಿ.ಎ.ಅಬ್ದುಲ್ ಖಾದರ್(63) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದ ಅವರು ಅಜ್ಜಿನಡ್ಕದ ಬದ್ರಿಯಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಬದ್ರಿಯಾ ವೆಲ್ಫೇರ್ ಸೊಸೈಟಿಯ ಅಧ್ಯಕ್ಷರಾಗಿ, ಅಜ್ಜಿನಡ್ಕ ಸರಕಾರಿ ಶಾಲೆಯ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ಗಲ್ಫ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿದ್ದರು.