ಜಯರಾಮ ಆಳ್ವ ಪೋಡಾರು
ಕೊಣಾಜೆ, ಆ.16: ಪಾವೂರು ಹರೇಕಳದ ಪೊಡಾರು ಮನೆಯ ನಿವಾಸಿ ಜಯರಾಮ ಆಳ್ವ (74) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರು ಪತ್ನಿ, ಒಂದು ಗಂಡು ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.
ಸುಮಾರು 30 ವರ್ಷಗಳಿಂದ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಂಚಾಲಕ ರಾಗಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಮಾರ್ಗದರ್ಶನ ನೀಡಿದ್ದರು. ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ, ಕೋಶಾಧಿಕಾರಿ ಯಾಗಿ ಮತ್ತು ಹರೇಕಳ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಸ್ಪರ್ಶ ಕಲಾವಿದರು ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ ಹಲವಾರು ನಾಟಕಗಳಿಗೆ ನಿರ್ದೇಶನ ಹಾಗೂ ತರಬೇತಿ ನೀಡಿದ್ದರು.
*ಸಚಿವ ಯು.ಟಿ.ಖಾದರ್, ಮಂಗಳೂರು ತಾಪಂ ಮಾಜಿ ಸದಸ್ಯ ಮುಸ್ತಫಾ ಹರೇಕಳ, ಹರೇಕಳ ಗ್ರಾಪಂ ಮಾಜಿ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ ಸಂತಾಪ ಸೂಚಿಸಿದ್ದಾರೆ.