ಗುಂಡು ಶೆಟ್ಟಿ ಕಪ್ಪೆಟ್ಟು
Update: 2025-12-04 22:40 IST
ಗುಂಡು ಶೆಟ್ಟಿ ಕಪ್ಪೆಟ್ಟು
ಉಡುಪಿ, ಡಿ.4: ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು.
ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು, ತನ್ನ ನೇರ ನಡೆ-ನುಡಿಗಳಿಂದ ಜನಾನುರಾಗಿಯಾಗಿದ್ದು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರ ಸಹಿತ ಬಂಧು ವರ್ಗ ಮತ್ತು ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.