×
Ad

ಇರಾ : ಗೋಪಾಲ ಮಾಸ್ಟರ್ ನಿಧನ

Update: 2026-07-11 14:29 IST

ಉಳ್ಳಾಲ:  ಇರಾ ಕುಂಡಾವು ನಿವಾಸಿ ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ (77)ಅಲ್ಪ ಕಾಲದ ಅನಾರೋಗ್ಯದಿಂದ ಅವರು ಜು. 10ರಂದು ನಿಧನ ಹೊಂದಿದರು.

1968 ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಸುಳ್ಯ, ನರಿಂಗಾನ, ಇರಾ, ಸುರಿಬೈಲ್, ಮುದುಂಗಾರುಕಟ್ಟೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾಗಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಅವರು ವಿಶೇಷವಾಗಿ ಶ್ರಮಿಸಿದ್ದರು.

ಶಿಸ್ತು ಹಾಗೂ ಅತ್ಯುತ್ತಮ ನಡತೆ ಬೋಧಿಸಿದ ಅವರ ಕಾರ್ಯವನ್ನು ಶ್ಲಾಘಿಸಿ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸಹಿತ ಹಲವು ಗೌರವಗಳು ಅವರಿಗೆ ಸಂದಿವೆ.

ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿಯಾಗಿ ಹಾಗೂ ಕ್ಷೇತ್ರ ಅಭಿವೃದ್ಧಿ ಚಟುವಟಿಕೆಯಲ್ಲಿ  ಸಕ್ರಿಯರಾಗಿದ್ದ ಅವರು, ಇರಾ ಭಜನಾ ಮಂಡಳಿ ಸಹಿತ ಸ್ಥಳೀಯ ಸಂಘಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಆಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News