ಮಂಗಳೂರು: ನಗರ ಹೊರವಲಯದ ತಲಪಾಡಿ ಸಮೀಪದ ಕೆ.ಸಿ.ರೋಡ್ ನಿವಾಸಿ ಅಬೂಬಕ್ಕರ್ ಅಬ್ಬಾಸ್ (63) ಗುರುವಾರ ಮುಂಜಾನೆ 3 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಗಲ್ಫ್ ನಲ್ಲಿ ಉದ್ಯೋಗಿಯಾಗಿದ್ದ ಅವರು 8 ವರ್ಷದ ಹಿಂದೆ ಊರಿಗೆ ಮರಳಿ ನೆಲೆಸಿದ್ದರು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 

ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor