ಮಂಗಳಪದವು : ಮುಹಮ್ಮದ್ ಸಮೀರ್ ನಿಧನ
Update: 2025-08-15 15:43 IST
ವಿಟ್ಲ: ಮಂಗಳಪದವು ಇಸ್ಮಾಯಿಲ್ ಅವರ ಪುತ್ರ ಮಹಮ್ಮದ್ ಸಮೀರ್ (24)ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಿಟ್ಲದ ಮೇಗಿನಪೇಟೆಯಲ್ಲಿ ಪ್ಲಾಸ್ಟಿಕ್ ಪ್ಲೇಟ್ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದರು. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಮತ್ತು ಸಹೋದರನ ಅಪಾರ ಬಂಧುಗಳನ್ನು ಅಗಲಿದ್ದಾರೆ.