ಮಂಗಳೂರು: ದಲಿತ ಸಂಘಟನೆಯ ಮುಖಂಡ ದೇವದಾಸ್ ನಿಧನ
Update: 2026-07-22 08:00 IST
ಮಂಗಳೂರು: ಡಿಎಸ್ಎಸ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ರಾಜ್ಯದ ಸಂಘಟನಾ ಸಂಚಾಲಕ ಎಂ.ದೇವದಾಸ್ ಹೃದಯಾಘಾತದಿಂದ ಬುಧವಾರ ನಿಧನರಾದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಮಂಗಳೂರಲ್ಲಿ ಪ್ರಾರಂಭಿಸುವಲ್ಲಿ ದೇವದಾಸ್ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಬಜಪೆ ಸಿದ್ದಾರ್ಥ ನಗರದಲ್ಲಿರುವ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4ಗಂಟೆಗೆ ಸಿದ್ದಾರ್ಥ ನಗರದಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮೃತ ದೇವದಾಸ್ ಅವರು ಪತ್ನಿ, ಇಬ್ಬರು ಹೆಣ್ಣುಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.