ಮಂಗಳೂರು : ನಗರದ ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ನವೀನಚಂದ್ರ ಶ್ರೀಯಾನ್ (69) ಅವರು ಅಲ್ಪಕಾಲದ ಅಸೌಖ್ಯದ ಕಾರಣ ಶುಕ್ರವಾರ(ಅ.9) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶ್ರೀಯಾನ್ ಅವರು ಈ ಹಿಂದೆ ಉರ್ವ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾಗಿ ಕೂಡ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.

ನವೀನ್‌ಚಂದ್ರ ಶ್ರೀಯಾನ್ ಅವರ ನಿಧನಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಸೇರಿದಂತೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor