×
Ad

ಆಲ್ಬರ್ಟ್ ವಲೇರಿಯನ್ ರೋಡ್ರಿಗಸ್

Update: 2023-11-22 15:57 IST

ಬಂಟ್ವಾಳ, ನ.22: ಬಂಟ್ವಾಳ ಸಮೀಪದ ಅಗ್ರಾರ್ - ಪೊನ್ನಂಗಿಲ ನಿವಾಸಿ ಆಲ್ಬರ್ಟ್ ವಲೇರಿಯನ್ ರೋಡ್ರಿಗಸ್(87) ಮಂಗಳವಾರ ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅಗ್ರಾರ್ ಚರ್ಚಿನ ಪಾಲನಾ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಇವರು ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್. ಖಾದರ್ ಬಂಟ್ವಾಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಸಹಿತ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News