ತಿಮ್ಮಪ್ಪ ಮೂಲ್ಯ, ನೇರಳಕಟ್ಟೆ

Update: 2024-03-18 06:25 GMT

ಬಂಟ್ವಾಳ, ಮಾ.18: ನೇರಳಕಟ್ಟೆ ಸಮೀಪದ ಗಣೇಶ ನಗರ ನಿವಾಸಿ ತಿಮ್ಮಪ್ಪ ಮೂಲ್ಯ(ತಿಮ್ಮಣ್ಣ) (69) ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. 

ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರ ಅಂತ್ಯಕ್ರಿಯೆ ಇಂದು ಸಂಜೆ ವೇಳೆಗೆ ಅನಂತಾಡಿಯ ಹಿಂದೂ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ