×
Ad

ನಾಗಪ್ಪ ಅಮೀನ್

Update: 2025-01-06 22:02 IST

ಮಂಗಳೂರು: ಹಂಚಿನ ಕಾರ್ಖಾನೆಯ ಕಾರ್ಮಿಕರಾಗಿ ದುಡಿದು, ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ)ನಲ್ಲಿ ತೊಡಗಿಸಿಕೊಂಡಿದ್ದ ಕಮ್ಯುನಿಸ್ಟ್ ಚಳವಳಿಯಲ್ಲಿ ತಪ್ಪದೆ ಪಾಲ್ಗೊಳ್ಳುತ್ತಿದ್ದ ಕೆಂಜಾರಿನ ನಾಗಪ್ಪ ಅಮೀನ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

*ಮೃತರ ನಿಧನಕ್ಕೆ ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ. ಶೇಖರ್, ನಿಕಟಪೂರ್ವ ಕಾರ್ಯದರ್ಶಿ ವಿ.ಕುಕ್ಯಾನ್, ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ವಿ. ರಾವ್, ಕಾರ್ಯದರ್ಶಿ ವಿ.ಎಸ್. ಬೇರಿಂಜ, ಎಐಟಿಯುಸಿ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಸುರೇಶ್ ಕುಮಾರ್ ಬಂಟ್ವಾಳ್, ಕರುಣಾಕರ ಮಾರಿಪಳ್ಳ, ಎಐವೈಎಫ್ ಜಿಲ್ಲಾ ನಾಯಕ ಜಗತ್ಪಾಲ್ ಕೋಡಿಕಲ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News