ಇಸ್ಮಾಯಿಲ್ ರೆಂಗೇಲು
Update: 2025-07-01 22:54 IST
ಬಂಟ್ವಾಳ: ಪಾಣೆಮಂಗಳೂರು-ಮೆಲ್ಕಾರ್ ಸಮೀಪದ ರೆಂಗೇಲು ನಿವಾಸಿ, ರೆಡಿಮೇಡ್ ಬಟ್ಟೆ ವ್ಯಾಪಾರಿ ಇಸ್ಮಾಯಿಲ್ ರೆಂಗೇಲು (58) ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ನಾಡಿನ ವಿವಿಧೆಡೆಗಳಲ್ಲಿ ನಡೆಯುತ್ತಿದ್ದ ವಾರದ ಸಂತೆಗಳಲ್ಲಿ ರೆಡಿಮೇಡ್ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಅವರಿಗೆ ಮಂಗಳವಾರ ಹೃದಯ ಬೇನೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.