ವೇದವ್ಯಾಸ ತಂತ್ರಿ
Update: 2025-07-22 20:36 IST
ಉಡುಪಿ, ಜು.22: ಮಾರ್ಪಳ್ಳಿ ನಿವಾಸಿ, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಪಾದೂರು ವೇದವ್ಯಾಸ ತಂತ್ರಿ(80) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಮಾರ್ಪಳ್ಳಿ ಚೆಂಡೆ ಬಳಗದ ಅಧ್ಯಕ್ಷರಾಗಿ, ಈ ಹಿಂದೆ ಮಾರ್ಪಳ್ಳಿ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ, ನಾಗರಿಕ ಸಮಿತಿಯ ಅಧ್ಯಕ್ಷರಾಗಿ ಅಭಿವೃದ್ಧಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.