×
Ad

ಎ.ಪಿ.ಕೊಡಂಚ

Update: 2025-09-01 21:39 IST

ಉಡುಪಿ, ಸೆ.1: ಉಡುಪಿ ಬಳಕೆದಾರರ ವೇದಿಕೆಯ ಹಿರಿಯ ವಿಶ್ವಸ್ಥ ಅಲೆವೂರು ಪದ್ಮನಾಭ ಕೊಡಂಚ(89) ಆ.31ರ ತಡರಾತ್ರಿ ಕೊಳ್ಳೇಗಾಲದ ತಮ್ಮ ಪುತ್ರಿಯ ನಿವಾಸದಲ್ಲಿ ನಿಧನಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಾರ್ಪೋರೇಶನ್ ಬ್ಯಾಂಕ್‌ನಲ್ಲಿ ಸುಮಾರು 39 ವರ್ಷಗಳ ಸೇವೆ ಸಲ್ಲಿಸಿ, ಜನರಲ್ ಮೇನೇಜರ್ ಹುದ್ದೆಯಿಂದ ನಿವೃತ್ತಿ ಹೊಂದಿದ ನಂತರ ಉಡುಪಿ ಬಳಕೆದಾರರ ವೇದಿಕೆಯಲ್ಲಿ ಸುಮಾರು 29 ವರ್ಷಗಳ ಕಾಲ ವಿಶ್ವಸ್ಥರಾಗಿ ಸೇವೆ ಸಲ್ಲಿಸಿ ಸಾವಿರಾರು ಮಂದಿ ಸಂತ್ರಸ್ತ ಗ್ರಾಹಕರಿಗೆ ಮಾರ್ಗದರ್ಶನ ನೀಡಿದ್ದರು.

ಗ್ರಾಹಕರಿಗಾಗಿ ಅನೇಕ ಕಮ್ಮಟ-ಕಾರ್ಯಾಗಾರಗಳನ್ನು ನಡೆಸಿ, ಗ್ರಾಹಕ ಜಾಗೃತಿ ಕೃತಿಗಳನ್ನು ಪ್ರಕಟಿಸಿದ್ದಲ್ಲದೆ ಬಳಕೆದಾರರ ವೇದಿಕೆ ಪತ್ರಿಕೆಯಲ್ಲಿ 10 ವರ್ಷಗಳಿಗೂ ಮಿಕ್ಕಿದ ಗ್ರಾಹಕ ಸಮಸ್ಯೆಗಳ ಪ್ರಶೋತ್ತರ ಅಂಕಣವು ಪ್ರಸಿದ್ದಿ ಪಡೆದಿತ್ತು.ದೂರದರ್ಶನದಲ್ಲಿ ಗ್ರಾಹಕ ಸ್ನೇಹಿ ಸಂದರ್ಶನ ಪ್ರಸಾರಗೊಂಡಿತ್ತು.

ಹಿರಿಯ ನಾಗರಿಕರ ವೇದಿಕೆ, ಅಂಚೆ ಸಲಹಾ ಸಮಿತಿ, ಪಾವನ ಪರಿಷತ್‌ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಕೊಡಂಚರು ಕಳೆದ ಫೆಬ್ರವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದಿಂದ ಸೇವಾಭೂಷಣ ಪ್ರಶಸ್ತಿಯನ್ನು ಪಡೆದಿದ್ದರು. ಮೃತರ ನಿಧನಕ್ಕೆ ಉಡುಪಿ ಬಳಕೆದಾರರ ವೇದಿಕೆ ಶ್ರದ್ಧಾಂಜಲಿ ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News