×
Ad

ಎನ್.ಎಸ್.ಅಡಿಗ ನಿಧನ

Update: 2023-09-02 23:13 IST

ಬ್ರಹ್ಮಾವರ, ಸೆ.2: ಸ್ಥಳೀಯ ಎಸ್ ಎಂ.ಎಸ್. ಪದವಿ ಪೂರ್ವ ಕಾಲೇಜು ಸೇರಿದಂತೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ಎನ್.ಎಸ್.ಅಡಿಗ(82) ಶನಿವಾರ ನಿಧನರಾದರು.

ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ಬ್ರಹ್ಮಾವರ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಅಧ್ಯಾಪಕರಾಗಿ, ಆಂಗ್ಲ ಭಾಷಾ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ 33 ವರ್ಷ ಸೇವೆ ಸಲ್ಲಿಸಿದ್ದರು.

ನಿವೃತ್ತಿ ನಂತರ ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜು, ಕುಂದಾಪುರ ವೆಂಕಟರಮಣ ಪಿಯು ಕಾಲೇಜು, ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.

ಬ್ರಹ್ಮಾವರ ಬ್ರಾಹ್ಮಣ ವಲಯ ಸಮಿತಿಯ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಅಜಪುರ ಕರ್ನಾಟಕ ಸಂಘದ ಸದಸ್ಯರಾಗಿ ಸಕ್ರಿಯರಾಗಿದ್ದ ಅವರು, ಭಾರತ್ ಸ್ಕೌಟ್ ಗೈಡ್ಸ್‌ನ ಸ್ಥಳೀಯ ಸಂಸ್ಥೆಯನ್ನು ಹುಟ್ಟುಹಾಕುವಲ್ಲಿ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News