ಪದ್ಮನಾಭ ಸಾಮಾನಿ ಇರುಬೈಲು
ಉಪ್ಪಿನಂಗಡಿ: ಪೆರ್ನೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಕಾಂಗ್ರೆಸ್‍ನ ಹಿರಿಯ ಕಾರ್ಯಕರ್ತ ಪದ್ಮನಾಭ ಸಾಮಾನಿ ಇರುಬೈಲು (70) ಅ.2ರಂದು ಹೃದಯಾಘಾತದಿಂದ ನಿಧನರಾದರು.
ಬೆಳಗ್ಗೆ ತೋಟಕ್ಕೆ ತೆರಳಿದ್ದ ಇವರು ಮರಳಿ ಮನೆಗೆ ಬರುವಾಗ ಅಂಗಳದಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಾಲಯದ ಬೈಲುವಾರು ಸಂಚಾಲಕರಾಗಿ, ವಿವಿಧ ಸಂಘ- ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಪ್ರೇಮ, ಪುತ್ರರಾದ ವೇಣುಗೋಪಾಲ ಶೆಟ್ಟಿ, ಅಜಯ್ ಶೆಟ್ಟಿ ಅವರನ್ನು ಅಗಲಿದ್ದಾರೆ.
ಮೃತರ ಮನೆಗೆ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಜಿ.ಪಂ. ಮಾಜಿ ಸದಸ್ಯ ಎಂ. ಎಸ್.ಮುಹಮ್ಮದ್, ನಿವೃತ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ ಶೆಟ್ಟಿ ಕಳೆಂಜ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.