ಅರ್ಚಕ ಬಾಲಕೃಷ್ಣ ಗಾಂಸ್ಕರ್
Update: 2025-11-16 16:43 IST
ಉಡುಪಿ, ನ.15: ಉಡುಪಿ ಅಂಬಾಗಿಲು ಸಂತೆಕಟ್ಟೆಯ ಮಾಸ್ತಿಅಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಬಾಲಕೃಷ್ಣ ಗಾಂಸ್ಕರ್(90) ಶನಿವಾರ ಸ್ವಗೃಹದಲ್ಲಿ ನಿಧನರಾದರು.
ಹಲವಾರು ದಶಕಗಳಿಂದ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿದ್ದ ಇವರು, ಭಗವದ್ಗೀತೆಯ ಬಗ್ಗೆ ಆಳವಾದ ಜ್ಞಾನ ಮತ್ತು ಆಸಕ್ತಿಯನ್ನು ಹೊಂದಿದ್ದರು. ಇವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ನಗರಸಭಾ ಸದಸ್ಯೆ ಮಂಜುಳಾ ವಿ.ನಾಯಕ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.