×
Ad

ಮೀನುಗಾರ ಮುಖಂಡ ರಾಮಚಂದ್ರ ಬೈಕಂಪಾಡಿ ನಿಧನ

Update: 2026-04-14 14:20 IST

ಸುರತ್ಕಲ್: ಮೀನುಗಾರ ಮುಖಂಡ, ಸಾಹಿತಿ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾದರು

ಕೆಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೊಗವೀರ ಸಮುದಾಯದ ಮುಖಂಡರಾಗಿ ಗುರುತಿಸಿಕೊಂಡಿದ್ದ ರಾಮಚಂದ್ರ ಬೈಕಂಪಾಡಿ ಅವರು, ಮೀನುಗಾರರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದವರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.

ರಾಮಚಂದ್ರ ಬೈಕಂಪಾಡಿ ಅವರು ಸಾಹಿತ್ಯ, ರಂಗಭೂಮಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. 2021ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸಾಹಿತಿಯಾಗಿ ಮತ್ತು ರಂಗಕರ್ಮಿಯಾಗಿ ಅವರು ಸಾಂಸ್ಕೃತಿಕ ಲೋಕಕ್ಕೆ ಕೊಡುಗೆ ನೀಡಿದ್ದರು.

ಸುದೀರ್ಘ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News

ಝೈನಬ