×
Ad

ಸಿದ್ದನಗೌಡ ಪೊಲೀಸ್ ಪಾಟೀಲ್ ನಿಧನ

Update: 2025-03-18 21:50 IST

ಕಲಬುರಗಿ : ನಗರದ ಗೋದುತಾಯಿ ನಿವಾಸಿಯಾಗಿದ್ದ ಸಿದ್ದಣ್ಣಗೌಡ ಪೊಲೀಸ್ ಪಾಟೀಲ್‌ (96) ಅವರು ವಯೋಸಹಜವಾಗಿ ಸೋಮವಾರ ಬೆಳಗ್ಗೆ ನಿಧನರಾಗಿದ್ದರು.

ಮೃತರು ಬೀದರ್‌ ಡಿವೈಎಸ್ಪಿ ಶಿವನಗೌಡ ಪಾಟೀಲ್‌ ಪುತ್ರ ಹಾಗೂ ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್‌ದ ಭೀಮಾನದಿ ದಂಡೆಯ ಮೇಲಿರುವ ತೋಟದ ಮನೆಯಲ್ಲಿ ಸೋಮವಾರ ಸಂಜೆ ನೆರವೇರಿತು.

ಸಿಂದಗಿ ಶಾಸಕ ರಮೇಶ ಭೂಸನೂರು, ಮಾಜಿ ಶಾಸಕ ಶರಣಪ್ಪ ಸುಣಗಾರ, ಕಲಬುರಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಡಿವೈಎಸ್ಪಿಗಳು, ಸಿಪಿಐಗಳು, ಪಿಎಸ್‌ಐ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News