×
Ad

ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ : 'ಪಹರೆ' ವೇದಿಕೆಗೆ ʼಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ' ಪ್ರದಾನ

Update: 2025-11-04 19:08 IST

ಹುಬ್ಬಳ್ಳಿ : ಪರಿಸರ ಸ್ವಚ್ಛತೆ ಮತ್ತು ಜಾಗೃತಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ 'ಪಹರೆ' ವೇದಿಕೆಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ʼಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಯಿತು.

ಪರಿಸರ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರಸ್ವಾಮಿ ಅವರು ವೇದಿಕೆಯ ಅಧ್ಯಕ್ಷ ನಾಗರಾಜ ನಾಯಕ ಅವರನ್ನು ಸನ್ಮಾನಿಸುವ ಮೂಲಕ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

​ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ 'ಪಹರೆ' ಸಂಸ್ಥಾಪಕ ಅಧ್ಯಕ್ಷರಾದ ನಾಗರಾಜ ನಾಯಕ ಅವರು, ಈ ಗೌರವಕ್ಕಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು. "ಹತ್ತು ವರ್ಷಗಳಿಗಿಂತ ಹೆಚ್ಚು ಕಾಲ ಸಮಾಜದ ಸ್ವಚ್ಛತೆಗಾಗಿ ಶ್ರಮಿಸಿದ ಪಹರೆಯ ಎಲ್ಲಾ ಸಹೋದರ, ಸಹೋದರಿಯರ ಸೇವೆಗೆ ಈ ಪ್ರಶಸ್ತಿಯು ಸಮರ್ಪಣೆ. ಈ ಗೌರವ ನಮ್ಮ ಗೌರವಾಧ್ಯಕ್ಷರು ಮತ್ತು ಪ್ರತಿಯೊಬ್ಬ ಕಾರ್ಯಕರ್ತರಿಗೂ ಸೇರಿದೆ. ಅಲ್ಲದೇ ಮುಂಬರುವ ದಿನಗಳಲ್ಲಿಯೂ ಪರಿಸರ ಮತ್ತು ಸ್ವಚ್ಛತೆಯ ಕಾರ್ಯಗಳಲ್ಲಿ ಪಹರೆ ಸಂಸ್ಥೆಯು ಸಕ್ರಿಯವಾಗಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್‌ ಮತ್ತು ಮಹೇಶ ತೆಂಗಿನಕಾಯಿ ಸೇರಿದಂತೆ ಹಲವು ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News