×
Ad

ಖರೀದಿಸಲು ಕಾಂಗ್ರೆಸ್ ಶಾಸಕರು ಕುರಿ, ಕೋಣ, ಕತ್ತೆಗಳೇ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Update: 2024-11-17 13:10 IST

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮತನಾಡಿದ ಸಚಿವರು, ಶಾಸಕರ ಖರೀದಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಈ ರೀತಿ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ತಮ್ಮ ಮತ್ತು ಸರ್ಕಾರದ ಮೇಲಿರುವ ಆರೋಪಗಳ ವಿಷಯಾಂತರಕ್ಕೆ ಹೀಗೆಲ್ಲ ಹೇಳುತ್ತಿದ್ದಾರೆ ಎಂದು ಜೋಶಿ ಆರೋಪಿಸಿದರು.

ಶಾಸಕರ ಸಾರ್ವಜನಿಕ ಬದುಕನ್ನು ಹೀಗೆ ಕಲುಷಿತಗೊಳಿಸೋ ಕೆಲಸವನ್ನು ಮುಖ್ಯಮಂತ್ರಿ ಆದವರು ಮಾಡಬಾರದು ಎಂದ ಪ್ರಹ್ಲಾದ ಜೋಶಿ, ಕಾಂಗ್ರೆಸ್ಸಿಗರು ಹೀಗೆ ಹುಚ್ಚು ಹುಚ್ಚು ರೀತಿ ಮಾತನಾಡುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಕಾಂಗ್ರೆಸ್ಸಿನ ಒಬ್ಬ ಶಾಸಕರಾದರೂ ಹೇಳಿದ್ದಾರೆಯೇ?: ಬಿಜೆಪಿ 50 ಕೋಟಿ ರೂ. ಆಫರ್ ನೀಡಿದೆ ಎಂದು ಅಥವಾ ಮಧ್ಯವರ್ತಿಯನ್ನು ಹೆಸರಿಸಿ ಕಾಂಗ್ರೆಸ್ಸಿನ ಒಬ್ಬ ಶಾಸಕನಾದರೂ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದ ಪ್ರಹ್ಲಾದ ಜೋಶಿ, ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಅಂದರೆ 2500 ಕೋಟಿ ರೂ. ಆಗುತ್ತದೆ. ಸಿಎಂಗೆ ಸ್ವಲ್ಪವಾದರೂ ಸೆನ್ಸ್ ಇದೆಯೇ? ಎಂದು ಪ್ರಶ್ನಿಸಿದರು. ಸಿಎಂ ರಾಜಕಾರಣ ಮಾಡಬೇಕೆಂಬ ಕಾರಣಕ್ಕೆ ಹೀಗೆ ಏನೆಲ್ಲ ಹೇಳುವುದು ಸರಿಯಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News