ಬ್ಯಾಡಗಿ : ಲಾರಿಗೆ ಬಸ್ ಢಿಕ್ಕಿ; 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ
ಹಾವೇರಿ: ಲಾರಿಯೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ 25 ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 4 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬ್ಯಾಡಗಿ ತಾಲೂಕಿನ ಛತ್ರದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ ಹೊರಟ್ಟಿದ್ದ ಖಾಸಗಿ ಬಸ್, ಪ್ರವಾಸ ಮುಗಿಸಿಕೊಂಡು ಮರಳಿ ಮಹಾರಾಷ್ಟ್ರ ಹೋಗುತ್ತಿದ್ದ ವೇಳೆ ಬಸ್ ಚಾಲಕ ನಿದ್ದೆ ಮಂಪರಿನಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.
ಗಾಯಾಳಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.